Latest

ನಾಳೆಯೇ ಎಸ್ಎಸ್ಎಲ್ ಸಿ ಫಲಿತಾಂಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :

 ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.

ಮಂಗಳವಾರ ಬೆಳಿಗ್ಗೆ 11.30ರ ವೇಳೆಗೆ ಪ್ರೌಢಶಿಕ್ಷಣ ಮಂಡಳಿ ಸುದ್ದಿಗೋಷ್ಠಿ ನಡೆಸಲಿದ್ದು, ಮಧ್ಯಾಹ್ನ 1 ಗಂಟೆಯ ಬಳಿಕ ಪ್ರೌಢಶಿಕ್ಷಣ ಮಂಡಳಿಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್. ಉಮಾಶಂಕರ್ ತಿಳಿಸಿದ್ದಾರೆ.

Home add -Advt

ಅನುತ್ತೀರ್ಣರಾದ ಮಕ್ಕಳಿಗೆ ಕೌನ್ಸೆಲಿಂಗ್ ಅಗತ್ಯವಾದರೆ ಪ್ರಗತಿವಾಹಿನಿ ಸಂಪರ್ಕಿಸಿ

ಈ ಬಾರಿಯೂ ಹಿಂದಿನ ವರ್ಷದಂತೆಯೇ ಎಲ್ಲ ವಿದ್ಯಾರ್ಥಿಗಳಿಗೂ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಬುಧವಾರ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ karresults.nic.in, kaceb.kar.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.  ರಾಜ್ಯಾದ್ಯಂತ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ರಾಜ್ಯದ ಒಟ್ಟು 5, 202 ಸರ್ಕಾರಿ, 3,244 ಅನುದಾನಿತ ಹಾಗೂ 6,004 ಅನುದಾನರಹಿತ ಶಾಲೆಗಳು ಸೇರಿ 14,450 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

  ಮೇ 2ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಎಸ್‌ಎಸ್‌ಎಲ್‌ಸಿ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ಅವರು ಎರಡು ಮೂರು ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದಿದ್ದರು. ಹೀಗಾಗಿ ಈ ಮೊದಲು ಫಲಿತಾಂಶದ ದಿನಾಂಕದ ಕುರಿತು ಗೊಂದಲ ಉಂಟಾಗಿತ್ತು. ಆದರೆ, ದಿಢೀರ್ ನಿರ್ಧಾರ ಬದಲಿಸಿದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಂಗಳವಾರವೇ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದೆ.  

ಅನುತ್ತೀರ್ಣರಾದ ಮಕ್ಕಳಿಗೆ ಕೌನ್ಸೆಲಿಂಗ್ ಅಗತ್ಯವಾದರೆ ಪ್ರಗತಿವಾಹಿನಿ ಸಂಪರ್ಕಿಸಿ

Related Articles

Back to top button