Latest

ಪಂಚರಾಜ್ಯ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ -ಕುಮಾರಸ್ವಾಮಿ

       ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

 ಐದು ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿಪ್ರಾಯ ಪಟ್ಟಿದ್ದಾರೆ.

Home add -Advt

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರ ನೀಡಿರುವ ತೀರ್ಪು ಜಾತ್ಯತೀತ ಪಕ್ಷಗಳತ್ತ ರಾಷ್ಟ್ರ ಸಾಗುತ್ತಿರುವುದರ ದ್ಯೋತಕವಾಗಿದೆ. ದೇಶದಾದ್ಯಂತ ಏಕಪಕ್ಷೀಯ ಆಡಳಿತದ ನಿರೀಕ್ಷೆ ಇಟ್ಟುಕೊಂಡು ವಿರೋಧ ಪಕ್ಷಗಳನ್ನು ದಮನ ಮಾಡಲು ಮುಂದಾಗಿದ್ದವರಿಗೆ ಮುಖಭಂಗವಾಗಿದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಈ ಐದೂ ರಾಜ್ಯಗಳ ಫಲಿತಾಂಶ ಜಾತ್ಯತೀತ ಪಕ್ಷಗಳೆಲ್ಲವೂ ಜೊತೆಯಾಗಿ ಚುನಾವಣೆ ಎದುರಿಸುವ ವೇದಿಕೆಯನ್ನು ದೊರಕಿಸಿಕೊಟ್ಟಿದೆ. ಕಾಂಗ್ರೆಸ್ ಪಕ್ಷದ  ನಾಯಕಿ ಸೋನಿಯಾ ಗಾಂಧಿ ಹಾಗೂ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಸಮಾನ ಮನಸ್ಕ ರಾಜಕೀಯ ನಾಯಕರನ್ನು ಒಂದೆಡೆಗೆ ತರಲು ರಾಹುಲ್ ಗಾಂಧಿ ಹಾಗೂ ಜಾತ್ಯತೀತ ಪಕ್ಷಗಳ ನಾಯಕರು ಮುಂದಾಗಬೇಕು ಎಂದು ಆಶಿಸಿದ್ದಾರೆ.



Related Articles

Back to top button