Latest

ಬಂದ್ ಗೆ ಸರಕಾರಿ ಬಲ: ಜನಸಾಮಾನ್ಯರಿಂದ ನೀರಸ ಪ್ರತಿಕ್ರಿಯೆ

ರಾಯಬಾಗದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಜನರು ಸಾರಿಗೆ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದರು.

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು/ಬೆಳಗಾವಿ

12 ಬೇಡಿಕೆಗಳನ್ನು ಮುಂದಿಟ್ಟು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ 2 ದಿನದ ಬಂದ್ ಗೆ ಮೊದಲ ದಿನ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಶಾಲೆ ಕಾಲೇಜಿಗೆ ಸರಕಾರವೇ ರಜೆ ನೀಡಿದ್ದರಿಂದ ಮತ್ತು ಸಾರಿಗೆ ಸಂಸ್ಥೆ ಬಸ್ ಸಂಚಾರ ವಿರಳಗೊಳಿಸಿದ್ದರಿಂದ ಜನಸಾಮಾನ್ಯರು ಅನಿವಾರ್ಯವಾಗಿ ಗೃಹಬಂಧನ ಅನುಭವಿಸುತ್ತಿದ್ದಾರೆ. ಹಾಗಾಗಿ ಎಲ್ಲೆಡೆ ರಸ್ತೆಗಳಲ್ಲಿ ಸಂಚಾರ ವಿರಳವಾಗಿದೆ, ವ್ಯಾಪಾರ ವಹಿವಾಟು ಕಡಿಮೆಯಾಗಿದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಖಾಸಗಿ ವಾಹನಗಳ ಸಂಚಾರದಲ್ಲಿ ಅಂತಹ ವ್ಯತ್ಯಾಸವೇನೂ ಆಗಿಲ್ಲ. ಆಟೋರಿಕ್ಷಾ, ಕ್ಯಾಬ್, ಓಲಾಗಳು ಓಡಾಡುತ್ತಿವೆ. ಆಸ್ಪತ್ರೆ, ಖಾಸಗಿ ವ್ಯವಹಾರಗಳು ಎಂದಿನಂತಿವೆ.

ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಬಸ್ ಸಂಚಾರ ಬಹುತೇಕ ಸ್ಥಗಿತಗೊಂಡಿದೆ. ತುರ್ತು ಕೆಲಸಕ್ಕಾಗಿ ಬಂದವರು ಪರದಾಡುವಂತಾಗಿದೆ. ಬೆಳಗಾವಿಯಲ್ಲಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಪ್ರತಿಭಟನೆಗೆ ಕೇವಲ ಬೆರಳೆಣಿಕೆ ಜನರು ಆಗಮಿಸಿ ಜಿಲ್ಲಾಧಿಕಾರಿ ಕಚೆರಿವರೆಗೆ ಮೆರವಣಿಗೆಯಲ್ಲಿ ತೆರಳಿದರು. ಸರಕಾರಿ ಕಚೇರಿಗಳಲ್ಲಿ ಹಾಜರಾತಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button