ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಚ್ಚಲ ಮನೆಯಲ್ಲಿ ಜಾರಿ ಬಿದ್ದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ರಾತ್ರಿ ಬೆಂಗಳೂರಿನಿಂದ ವಾಪಸ್ಸಾದ ಗೌಡರು, ಮನೆಯಲ್ಲಿ ಬಚ್ಚಲು ಮನೆಗೆ ತೆರಳಿದ್ದಾಗ ಕಾಲು ಜಾರಿ ಬಿದ್ದರು. ಇದರಿಂದಾಗಿ ಬಲಗಾಲಿಗೆ ಪೆಟ್ಟಾಗಿದೆ.
ಪರೀಕ್ಷಿಸಿದ ವೈದ್ಯರು ಎಂಆರ್ ಐ ಸ್ಕ್ಯಾನ್ ಮಾಡಿಸಬೇಕೆಂದಿದ್ದಾರೆ. ಸಧ್ಯಕ್ಕೆ ಗೌಡರಿಗೆ ನಡೆದಾಡಲು ಸಾಧ್ಯವಾಗುತ್ತಿಲ್ಲ. ಇನ್ನೂ 2-3 ದಿನ ಆಸ್ಪತ್ರೆಯಲ್ಲೇ ಇರಬೇಕಾಗಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ