Latest

*ಬಸ್ ಟಿಕೆಟ್ ದರ ಏರಿಕೆ*: *ಇಲ್ಲಿದೆ ದರ ಏರಿಕೆ ಪಟ್ಟಿ ವಿವರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಕ್ಕಿ, ಬೇಳೆಕಾಳುಗಳು, ಹಾಲು, ಮೊಸರಿನ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ ನೀಡಿದೆ. ಸಾರಿಗೆ ಬಸ್ ಟಿಕೆಟ್ ದರ ಭಾರಿ ಏರಿಕೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದ ನಾಲ್ಕು ಸಾರಿಗೆ ಬಸ್ ಗಳ ಟಿಕೆಟ್ ದರ ಏರಿಕೆಯಾಗಿದ್ದು, ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಥಿಯಲ್ಲಿಯಲ್ಲಿ ಮಾತನಾಡಿದ ಸಚಿವರು, ನಾಲ್ಕು ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿಯಲ್ಲಿರುವುದರಿಂದ ಸಾಕಷ್ಟು ಹೊರೆಯಾಗುತ್ತಿದೆ. ಅಲ್ಲದೇ ಸಾರಿಗೆ ನೌಕರರ ಹಾಗೂ ಸುಬ್ಬಂದಿಗಳ ವೇತನ ಪರಿಷ್ಕೃರಣೆ ಮಾಡಬೇಕಿದೆ. ಹಾಗಾಗಿ ಟಿಕೆಟ್ ದರ ಏರಿಕೆ ಅನಿವಾರ್ಯ ಎಂದರು. ಡೀಸೆಲ್ ದರ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಾದಾಗ ಮಾತ್ರ ಟಿಕೆಟ್ ದರ ಏರಿಸಲು ನಿಗಮಗಳಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಗರಿಷ್ಠ 9 ರೂಪಾಯಿಯಂತೆ ಏರಿಕೆ ಮಾಡಲಾಗಿದೆ. ಸ್ಟೇಜ್ ವಾರು ದರ ಏರಿಕೆ ಮಾಡಲಾಗಿದೆ ಎಂದು ತಿಳಿಸಿದ್ದರಎ.

ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇಕಡಾವಾರು ಲೆಕ್ಕದಲ್ಲಿ ಹೆಚ್ಚಿಸಲಾಗಿದೆ. ಸ್ಟೇಜ್‌ಗಳ ಆಧಾರದ ಮೇಲೆ ಮಾತ್ರ ಏರಿಕೆ ಮಾಡಲಾಗಿದೆ. ಮೆಜೆಸ್ಟಿಕ್‌ನಿಂದ ನೆಲಮಂಗಲ ಹಾಗೂ ಹೊಸಕೋಟೆಗೆ ಇದ್ದ 35 ರೂ. ದರ ಈಗ ₹44ಕ್ಕೆ ಏರಿಕೆಯಾಗಿದ್ದು, ಪ್ರತಿ ಸ್ಟೇಜ್‌ಗೆ ಇದ್ದ 6 ರೂ. ದರ 10 ರೂ.ಗೆ ಹೆಚ್ಚಿಸಲಾಗಿದೆ.

Related Articles

Back to top button