Latest

ಬಿಬಿಎಂಪಿ ವ್ಯಾಪ್ತಿಗೆ ಮೌದ್ಗಿಲ್ ಸ್ಪೇಷಲ್ ಆಫೀಸರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಫ್ಲೈಯಿಂಗ್ ಸ್ಕ್ವಾಡ್, ಸರ್ವೆಲನ್ಸ  ಟೀಮ್ ಮತ್ತು ಅಬಕಾರಿ ವಿಚಕ್ಷಣಾ ದಳಗಳು ತೃಪ್ತಿಕರವಾಗಿ ಕೆಲಸ ಮಾಡುತ್ತಿಲ್ಲ ಎಂದು ಚುನಾವಣೆ ಆಯೋಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

Home add -Advt

ಈ ಹಿನ್ನೆಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಮನೀಷ್ ಮೌದ್ಗಿಲ್ ಅವರನ್ನು ಬೆಂಗಳೂರು ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳ ವಿಶೇಷಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ಮಖ್ಯ ಚುನಾವಣಾ ಆಯುಕ್ತ ಸಂಜೀವ ಕುಮಾರ ಈ ನೇಮಕ ಮಾಡಿದ್ದು, ಹಣ ಮತ್ತು ಲಿಕ್ಕರ್  ಸಾಗಾಣಿಕೆ ತಡೆಯುವಲ್ಲಿ ವಿಶೇಷ ಮುತುವರ್ಜಿ ವಹಿಸುವಂತೆ ಸೂಚಿಸಿದ್ದಾರೆ. ಜೊತೆಗೆ ಈ ಸಂಬಂಧದ ಸಾಪ್ಟವೇರ್ ನ್ನು ಇನ್ನಷ್ಟು ಅಭಿವೃದ್ಧಿಪಡಿಸುವಂತೆ ಸೂಚಿಸಿದ್ದಾರೆ. 

Related Articles

Back to top button