ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಬೀದಿನಾಯಿ ದಾಳಿಯಿಂದ ಪಂತಬಾಳೆಕುಂದ್ರಿಯ ಬಾಲಕನೋರ್ವ ಸಾವನ್ನಪ್ಪಿದ್ದಾನೆ.
ಅಬ್ಬಾಸ್‌ಅಲಿ ಈಸೂಬ್ ಸನದಿ ಎನ್ನುವ 2 ವರ್ಷದ ಮಗುವಿನ ಮೇಲೆ ಬುಧವಾರ ಬೀದಿ ನಾಯಿ ದಾಳಿ ಮಾಡಿತ್ತು. ಕುತ್ತಿಗೆ ಹಾಗೂ ತಲೆಗೆ ಗಾಯವಾಗಿತ್ತು. ಬಾಲಕನನ್ನು ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಅತಿಯಾಗಿದ್ದು, ನಿಯಂತ್ರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ