ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನಗರದ ರೈಲ್ವೆ ನಿಲ್ದಾಣದಲ್ಲಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಸಮಾರಂಭ ಫೆ.೨೮ ರಂದು ಬೆಳಗ್ಗೆ ೧೧ಕ್ಕೆ ನಡೆಯಲಿದೆ. ಸಂಸದ ಸುರೇಶ ಅಂಗಡಿ ಶಂಕುಸ್ಥಾಪನೆ ನೆರವೇರಿಸಲಿದ್ದು, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ, ಲಕ್ಷ್ಮಿ ಹೆಬ್ಬಾಳಕರ, ವಿಪ ಸದಸ್ಯರಾದ ಮಹಾಂತೇಶ ಕವಟಗಿಮಠ, ಹಣಮಂತ ನಿರಾಣಿ, ವಿವೇಕರಾವ ಪಾಟೀಲ, ಅರುಣ ಶಹಾಪುರ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಮೇಯರ್ ಬಸಪ್ಪ ಚಿಕ್ಕಲದಿನ್ನಿ ಮುಂತಾದವರು ಉಪಸ್ಥಿತರಿರಲಿದ್ದಾರೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.