ಪ್ರಗತಿವಾಹಿನಿ ಸುದ್ದಿ, ನವದೆಹಲಿ/ ಬೆಂಗಳೂರು
ರಾಷ್ಟ್ರದಲ್ಲಿ ಎರಡನೇ ಹಂತ ಮತ್ತು ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಅತ್ಯಂತ ಮಂದಗತಿಯಲ್ಲಿ ಮತ ಚಲಾಯಿಸುತ್ತಿದ್ದಾರೆ.
ಚತ್ತೀಸ್‌ಘಡದ ಕಾಂಕೇರ್‌ನ ಬೂತ್ ಸಂಖ್ಯೆ 186 ರಲ್ಲಿ ಮತಗಟ್ಟೆ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕರ್ನಾಟಕದ ಚಾಮರಾಜನಗರ ಮತಗಟ್ಟೆ ಸಂಖ್ಯೆ 48 ರಲ್ಲಿ ಹೃದಯಾಘಾತದಿಂದ ಮತಗಟ್ಟೆ ಅಧಿಕಾರಿಯೊಬ್ಬರು ನಿಧನರಾಗಿದ್ದಾರೆ. ಮೃತರನ್ನು ಶಾಂತಮೂರ್ತಿ (48) ಎಂದು ಗುರುತಿಸಲಾಗಿದೆ.
ಪಶ್ಚಿಮ ಬಂಗಾಳದ ರಾಯ್‌ಗಂಜ್‌ನಲ್ಲಿ ಟಿಎಂಸಿ ಕಾರ್ಯಕರ್ತರು ಬೂತ್ ಅನ್ನು ತಮ್ಮ ವಶಕ್ಕೆ ಪಡೆಯಲು ಯತ್ನಿಸುತ್ತಿದ್ದಾರೆ. ಅಲ್ಲಿ ಬೂತ್ ಒಳಗೆ ಪ್ರಚಾರ ಮಾಡಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಕಾರ್ಯದರ್ಶಿ ಆರೋಪಿಸಿದ್ದಾರೆ.
ಕಾಶ್ಮೀರದಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಆಸ್ಸಾಂ ನಲ್ಲಿ ಅತ್ಯಂತ ವೇಗವಾಗಿ ಮತದಾನ ನಡೆಯುತ್ತಿದ್ದರೆ, ಕರ್ನಾಟಕದ ದಕ್ಷಿಣ ಭಾಗದಲ್ಲಿ ಜನರು ಮತಗಟ್ಟೆಗೆ ಬರುತ್ತಿಲ್ಲ. ಅತ್ಯಂತ ನಿಧಾನಗತಿಯಲ್ಲಿ ಮತದಾನ ನಡೆಯುತ್ತಿದೆ. ಮತದಾನ ಜಾಗೃತಿ ಕಾರ್ಯದ ಮಧ್ಯೆಯೂ ಜನರು ಮತದಾನಕ್ಕೆ ಉತ್ಸಾಹ ತೋರದಿರುವುದು ಆತಂಕಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್ ಕುಮಾರಸ್ವಾಮಿ ಮತದಾನ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ