Latest

ಮತದಾರರ ಗುರುತಿನ ಚೀಟಿ ಇಲ್ಲದಲ್ಲಿ ಪರ್ಯಾಯ 11 ದಾಖಲೆ ತೋರಿಸಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

 ಮತದಾರರ ಗುರುತಿನ ಚೀಟಿ ಅಥವಾ 11 ಪರ್ಯಾಯ ದಾಖಲಾತಿಗಳನ್ನು ಮತದಾನ ದಿನದಂದು ತೋರಿಸಿ ಮತದಾನ ಮಾಡಲು ಅವಕಾಶ ಕಲ್ಪಿಸಿ ಚುನಾವಣೆ ಆಯೋಗ ಆದೇಶ ಹೊರಡಿಸಿದೆ.

Home add -Advt

ಮತದಾರರಿಗೆ ಮತದಾರರ ಗುರುತಿನ ಚೀಟಿ ನೀಡಲಾಗಿದೆ. ಮತದಾನ ದಿನದಂದು ಮತದಾರರು ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬೇಕಾಗುತ್ತದೆ. ಮತದಾರರ ಗುರುತಿನ ಚೀಟಿ ಹಾಜರಪಡಿಸಲು ಸಾಧ್ಯವಿಲ್ಲದ ಪಕ್ಷದಲ್ಲಿ ಪರ್ಯಾಯವಾಗಿ 11 ದಾಖಲೆಗಳಲ್ಲಿ ಯಾವುದಾದರೊಂದು ದಾಖಲೆಯನ್ನು ತೋರಿಸಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಪಾಸ್‌ಪೊರ್ಟ್, ಚಾಲನಾ ಪರವಾನಿಗೆ ಪತ್ರ, ಭಾವಚಿತ್ರವಿರುವ ಬ್ಯಾಂಕ್/ ಅಂಚೆ ಕಚೇರಿ ಪಾಸ್‌ಬುಕ್, ಪ್ಯಾನ್ ಕಾರ್ಡ್, ನರೆಗಾ ಜಾಬ್ ಕಾರ್ಡ್, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು ಮತ್ತು ಖಾಸಗಿ ನೌಕರರು ಭಾವಚಿತ್ರವುಳ್ಳ ಸೇವಾ ಗುರುತಿನ ಚೀಟಿ, ಸ್ಮಾರ್ಟ್ ಕಾರ್ಡ್, ಕಾರ್ಮಿಕ ಸಚಿವಾಲಯದ ಯೋಜನೆಯಡಿಯಲ್ಲಿ ಬಿಡುಗಡೆ ಮಾಡಲಾದ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಭಾವಚಿತ್ರವುಳ್ಳ ಪಿಂಚಣಿ ದಾಖಲಾತಿಗಳು, ಸಂಸದರು, ಶಾಸಕರು, ಎಮ್‌ಎಲ್ಸಿಗಳಿಗೆ ಬಿಡುಗಡೆ ಮಾಡಿದ ಅಧಿಕೃತ ಗುರುತಿನ ಚೀಟಿಗಳು ಮತ್ತು ಆಧಾರ ಕಾರ್ಡ್ ಇವುಗಳಲ್ಲಿ ಯಾವುದಾದರೊಂದನ್ನು ತೋರಿಸಿ ಮತದಾನ ಮಾಡಬೇಕೆಂದು ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ, ಇತರ ಗ್ರುಪ್ ಗಳಿಗೆ ಶೇರ್ ಮಾಡಿ)

Related Articles

Back to top button