ಪ್ರಗತಿವಾಹಿನಿ ಸುದ್ದಿ, ಮುಂಬೈ:
ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಸಾಕ್ಷ್ಯಾಧಾರದ ಕೊರತೆಗಳ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ರಾಷ್ಟ್ರೀಯ ತನಿಖಾ ದಳ ಅಸಹಾಯಕತೆ ವ್ಯಕ್ತಪಡಿಸಿದೆ.
ಮಾಲೇಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿರುವ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಘಟನೆಯಲ್ಲಿ ಮೃತಪಟ್ಟಿದ್ದ ಸೈಯದ್ ಅಹ್ಮದ್ ಅವರ ಪುತ್ರ ನಿಸಾರ್ ಬಿಲಾಲ್ ಎನ್ಐಎಗೆ ಮನವಿ ಸಲ್ಲಿಸಿದ್ದರು.
ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಸಾಕ್ಷ್ಯಾಧಾರದ ಕೊರತೆ ಇದೆ. ಆದರೆ, ಚುನಾವಣೆಗೆ ಸ್ಪರ್ಧಿಸಲು ಅವರಿಗೆ ಅವಕಾಶ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ