Latest

ಮೋದಿಯನ್ನು ಈಗ ಸೋಲಿಸದಿದ್ದರೆ ಇನ್ನೆಂದೂ ಆಗದು -ಕೇಜ್ರಿವಾಲ್

ಪ್ರಗತಿವಾಹಿನಿ ಸುದ್ದಿ, ನವದೆಹಲಿ

Home add -Advt

ಪ್ರಧಾನಿ ನರೇಂದ್ರ ಮೋದಿಯವರನ್ನು ಈಗ ಸೋಲಿಸಲಾಗದಿದ್ದರೆ ಇನ್ನೆಂದೂ ಆಗುವುದಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ  ಶಾಶ್ವತವಾಗಿ ಪ್ರಧಾನಿ ಆಗಿರುತ್ತಾರೆ. ಮುಂದೆ ದೇಶದಲ್ಲಿ ಚುನಾವಣೆಯೇ ಇರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್‌ ಆತಂಕ ವ್ಯಕ್ತಪಡಿಸಿದ್ದಾರೆ. 

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ದೇಶವನ್ನು ನಡೆಸಲು ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ ಅವರ ತಂತ್ರಗಳನ್ನು ಅನುಸರಿಸುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಕೊನೆಗೊಳ್ಳುವ ಅಪಾಯವಿದೆ.  ದೇಶ ಪ್ರೇಮಿಗಳೆಲ್ಲ ಸೇರಿ ಮೋದಿ ಸರ್ಕಾರ ಪುನಃ ಅಧಿಕಾರಕ್ಕೆ ಬರದಂತೆ ತಡೆಯುವ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದ್ದಾರೆ.

(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ)

 

Related Articles

Back to top button