
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿಟಿಯುನಿಂದ ರಣಕುಂಡೆ ಕ್ರಾಸ್ ವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸೇರಿ ಸೋಮವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಪ್ರಯತ್ನದಿಂದ 1.71 ಕೋಟಿ ರೂ, ಮಂಜೂರಾಗಿದ್ದು, ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಈ ರಸ್ತೆ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿದ್ದು, ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲಿದೆ.
ಈ ವೇಳೆ ರಣಕುಂಡೆ, ಕೀಣೆ, ಕರ್ಲೆ, ನಾವಗೆ, ಜಾನೇವಾಡಿ, ಬಾಮನವಾಡಿ, ಸಂತಿ ಬಸ್ತವಾಡ, ವಾಘವಾಡೆ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.
ಖಣಗಾಂವ್ ರಸ್ತೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಖಣಗಾಂವ ಬಿ.ಕೆ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಒಳಾಂಗಣ ರಸ್ತೆಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸೋಮವಾರ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳ್ಕರ್ ಹಾಗೂ ಗ್ರಾಮಸ್ಥರು ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ವೇಳೆ ಗ್ರಾಮದ ಗುರು ಹಿರಿಯರು, ಯುವ ಕಾಂಗ್ರೆಸ್ ನ ಕಾರ್ಯಕರ್ತರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ