ಪ್ರಗತಿವಾಹಿನಿ ಸುದ್ದಿ ಮಂಡ್ಯ:
ಗುರುವಾರ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಐಟಿ ದಾಳಿ ನಡೆಯಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡಯದಲ್ಲಿ ಮಾತನಾಡಿದ ಅವರು ಬಿಜೆಪಿಯ ಮಿತ್ರರೊಬ್ಬರು ತಮಗೆ ಈ ಮಾಹಿತಿ ನೀಡಿದ್ದಾರೆ ಎಂದಿದ್ದಾರೆ. ಸುಮಾರು 300 ಐಟಿ ಅಧಿಕಾರಿಗಳು ಹೊರರಾಜ್ಯದಿಂದ ರಾಜ್ಯಕ್ಕೆ ಬರುತ್ತಿದ್ದಾರೆ. ಅವರನ್ನು ವಿಮಾನ ನಿಲ್ದಾಣದಿಂದ ಪಿಕ್-ಅಪ್ ಮಾಡಲು ಕ್ಯಾಬ್ ಗಳು ತಯಾರಾಗಿ ನಿಂತಿವೆ ಎಂದು ಕುಮಾರಸ್ವಾಮಿ ಹೇಳಿದರು.
ಸ್ಥಳೀಯ ಪೊಲೀಸರ ನೆರವನ್ನು ಪಡೆಯದೆ ಸಿಆರ್ಪಿಎಫ್ ಪಡೆಯನ್ನು ಅವರು ಕರೆತರಲಿದ್ದಾರೆ. ಐಟಿ ಅಧಿಕಾರಿಗಳು ಬಿಜೆಪಿಯ ಏಜೆಂಟ್ಗಳಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ.
ಐಟಿ ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣೆ ಸಮಯದಲ್ಲಿ ಬಿಜೆಪಿ ದಬ್ಬಾಳಿಕೆ ಮಾಡಲು ಯತ್ನಿಸುತ್ತಿದೆ. ಐಟಿ ಅಧಿಕಾರಿಗಳು ದಬ್ಬಾಳಿಕೆ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಪಶ್ಚಿಮ ಬಂಗಾಳ ಸಿಎಂ ಮಾಡಿದ ರೀತಿಯಲ್ಲಿಯೇ ನಾನೂ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಕುಮಾರಸ್ವಾಮಿ ನೀಡಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಸಿಬಿಐ ಅಧಿಕಾರಿಗಳನ್ನೇ ಬಂಧಿಸುವಂತೆ ಆದೇಶ ನೀಡಿದ್ದರು.
(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲಾ ಗ್ರುಪ್ ಗಳಿಗೆ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ