Latest

ರಾಹುಲ್ ಗಾಂಧಿಗೆ ನಮ್ಮ ಕಾಂಗ್ರೆಸ್ ಪತ್ರಿಕೆ ನೀಡಿದ ದಿನೇಶ ಗುಂಡೂರಾವ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಕರ್ನಾಟಕ ಪ್ರದೇಶ ಕಾಂಗ್ರೆಸ್ ನ್ಯಾಷನಲ್ ಹೆರಾಲ್ಡ್ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಎನ್ನುವ ಪಾಕ್ಷಿಕ ಪತ್ರಿಕೆ ಆರಂಭಿಸಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ  ಪತ್ರಿಕೆಯ ಪ್ರತಿಯನ್ನು ನೀಡಿದರು.

 ಚುನಾವಣೆ ಪ್ರಚಾರಕ್ಕಾಗಿ ಕಾಂಗ್ರೆಸ್ ನಿಂದ್ ಹೊಸ ಪತ್ರಿಕೆ

ಶನಿವಾರ ದೆಹಲಿಗೆ ಭೇಟಿ ನೀಡಿದ್ದ ದಿನೇಶ್ ಗುಂಡೂರಾವ್ ಅವರು ರಾಹುಲ್ ಗಾಂಧಿ ಅವರಿಗೆ ಪತ್ರಿಕೆಯನ್ನು ನೀಡಿದರು. 

Home add -Advt

2019ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಚಾರಕ್ಕಾಗಿ ಈ ಪತ್ರಿಕೆ ಆರಂಭಿಸಿದೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಮುಖವಾಣಿಯಾಗಿ ನ್ಯಾಷನಲ್ ಹೆರಾಲ್ಟ್ ಪತ್ರಿಕೆ ಇದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಕನ್ನಡದಲ್ಲಿ ‘ನಮ್ಮ ಕಾಂಗ್ರೆಸ್’  ಪ್ರತಿ 15 ದಿನಕ್ಕೊಮ್ಮೆ ಪ್ರಕಟವಾಗಲಿದೆ.

ಏಳು ದಶಕದಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವ ಸಾಧನೆಗಳನ್ನು, ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ,  ರಾಜಕೀಯ ವಿಶ್ಲೇಷಣೆ, ವಿರೋಧ ಪಕ್ಷಗಳ ವೈಫಲ್ಯವನ್ನು ಪತ್ರಿಕೆ ಒಳಗೊಂಡಿರುತ್ತದೆ.

Related Articles

Back to top button