*ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆಗಿರುವ ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂಪೂರ್ಣ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದು, ಎಲ್ಲರೂ ಮುಂದೆ ಕೂಡ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದರು.

ಮಾವಿನಕಟ್ಟಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರೊಂದಿಗೆ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ, ದೇವಿಗೆ ಉಡಿ ತುಂಬಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದ ನಂತರ ಅವರು ಮಾತನಾಡಿದರು.

ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಜಾತ್ರೆಯಾದರೂ ಅಲ್ಲಿ ಕೊಟ್ಯಂತರ ರೂ. ವೆಚ್ಚ ಮಾಡಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಮಾವಿನಕಟ್ಟಿಯಲ್ಲಿ ಸಹ ಎಲ್ಲ ರೀತಿಯ ವ್ಯವಸ್ಥೆ ಕಲ್ಸಿಸಲಾಗಿದೆ. 9 ದಿನದ ಜಾತ್ರೆ ಸುಗಮವಾಗಿ ನಡೆಯಲಿ. ಊರಿನಲ್ಲಿ ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಅವರು ಆಶಿಸಿದರು.
ಈ ವೇಳೆ ಗಿರಿಜಾ ಹಟ್ಟಿಹೊಳಿ, ಗ್ರಾಮದ ಹಿರಿಯರು, ಪಂಚ ಕಮೀಟಿಯ ಮುಖಂಡರು, ಭಕ್ತಾಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.



