Kannada NewsLatest

ವಡಗಾವಿಯಲ್ಲಿ 23 ರಂದು ಬೆಳಗಾವಿ ತಾಲೂಕಾ 7ನೇ ಕನ್ನಡ ಸಾಹಿತ್ಯ ಸಮ್ಮೇಳನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಬೆಳಗಾವಿ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಜೂನ್ 23 ರಂದು ವಡಗಾವಿಯ ಮಲ್ಲಿಕಾರ್ಜುನ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

Home add -Advt

ಸಮ್ಮೇಳನದಲ್ಲಿ ಬೆಳಿಗ್ಗೆ 9 ಗಂಟೆಗೆ ಮಂಗಲಾ ಮೆಟಗುಡ್ಡ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದು, ಲೀಲಾವತಿ ಎಸ್ ಎಚ್. (ಕ್ಷೇತ್ರ ಶಿಕ್ಷಣಾಧಿಕಾರಿ,ಬೆಳಗಾವಿ ಗ್ರಾಮೀಣ) ಭುವನೇಶ್ವರಿ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಕಾರಂಜಿಮಠದ ಗುರುಸಿದ್ಧ ಸ್ವಾಮಿಗಳು ಉದ್ಘಾಟನಾ ಸಮಾರಂಭದ  ಸಾನಿಧ್ಯ
ವಹಿಸಲಿದ್ದು, ಶಿವಶಂಕರ ಹಿರೇಮಠ ಅವರು ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಿಲಿದ್ದಾರೆ. ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿದ್ದು, ಪ್ರಥಮ ಕನ್ನಡ ಮಹಾಪೌರ ಡಾ.ಸಿದ್ಧನಗೌಡ ಪಾಟೀಲ ಅವರು ಅಧ್ಯಕ್ಷತೆಯನ್ನು ವಹಿಸುವರು. ನಂತರ ವಿಜಯಕುಮಾರ ಜೀರಗ್ಯಾಳರ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಆಶಯ ನುಡಿ ಮಂಡಿಸಲಿದ್ದಾರೆ.

ಈ ಸಮ್ಮೇಳನದಲ್ಲಿ ವಿಚಾರ ಗೋಷ್ಠಿ, ಮಹಿಳಾ ಕವಿಗೋಷ್ಠಿ, ಹಾಸ್ಯ ಗೋಷ್ಠಿ, ಸಮಾರೋಪ ಸಮಾರಂಭ ನಡೆಯಲಿದೆ.

Related Articles

Back to top button