ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಉದ್ಯೋಗಕ್ಕಾಗಿ ವಿದೇಶಗಳಲ್ಲಿ ನೆಲೆಸಿದ್ದರೂ ಭಾರತೀಯ ಸಂಸ್ಕೃತಿಯನ್ನು ಮರೆಯದಿರುವುದು, ಬಸವ ಜಯಂತಿಯಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಅಥಣಿ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಹೇಳಿದ್ದಾರೆ.
ಓಮಾನ್ ದೇಶದ ಮಸ್ಕತ್ ನಲ್ಲಿ ಬಸವ ಹಾಗೂ ಅಕ್ಕನ ಬಳಗದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತೀಯರು, ಕನ್ನಡಿಗರು ತಮ್ಮ ಪ್ರತಿಭೆಗೆ ತಕ್ಕಂತೆ ವಿವಿಧ ದೇಶಗಳಲ್ಲಿ ಉದ್ಯೋಗ ನಡೆಸುತ್ತಿದ್ದಾರೆ. ಆದರೆ ಎಲ್ಲೇ ಇದ್ದರೂ ಭಾರತದಲ್ಲಿ, ಕರ್ನಾಟಕದಲ್ಲಿ ಆಚರಣೆ ಮಾಡುವ ಎಲ್ಲ ಹಬ್ಬಗಳನ್ನು ಅತ್ಯಂತ ಉತ್ಸಾಹದಿಂದ ಆಚರಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಬಸವಣ್ಣನ ಜ್ಞಾನ ಬೆಳೆಸುವುದು ಅಗತ್ಯವಾಗಿದೆ. 12ನೇ ಶತಮಾನದಲ್ಲಿಯೇ ಜಾತಿ ವ್ಯವಸ್ಥೆ ಹೋಗಲಾಡಿಸುವ ಮತ್ತು ಅನುಭವ ಮಂಟಪ ಸ್ಥಾಪನೆಯಂತಹ ಅದ್ಭುತ ಕಲ್ಪನೆಗಳು ಬಸವಣ್ಣನಿಂದ ಬಂದಿತ್ತು. ಆದರೆ ಇಂದಿಗೂ ಜಾತಿ ವ್ಯವಸ್ಥೆ ಹೋಗಲಾಡಿಸಲು ನಮ್ಮಿಂದ ಸಾಧ್ಯವಾಗಿಲ್ಲ ಎಂದು ಸ್ವಾಮೀಜಿ ಹೇಳಿದರು.
ಮಸ್ಕತ್ ನ ಬಸವ ಮತ್ತು ಅಕ್ಕನ ಬಳಗದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ