Kannada NewsLatest

ಶಿವು ಉಪ್ಪರ ಹತ್ಯೆ ತನಿಖೆ ಆಗಲೇಬೇಕು -ಬಿಜೆಪಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 

ಹಿರೇಬಾಗೇವಾಡಿ ಎಪಿಎಂಸಿ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಶಿವು ಉಪ್ಪಾರ ಸಾವಿನ ಕುರಿತು ತನಿಖೆ ನಡೆಸಬೇಕು. ಇಲ್ಲವಾದಲ್ಲಿ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವು ಸಾವಿನ ಹಿಂದೆ ಗೋಹಂತಕರ ಕೈವಾಡವಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ. ತಕ್ಷಣ ತನಿಖೆಗೆ ಆದೇಶ ನೀಡಬೇಕು. ಮೃತನ ಕುಟುಂಬಕ್ಕೆ 5 ಲಕ್ಷ ರೂ. ಪರಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

Home add -Advt

ಪ್ರಕರಣದ ಸಮಗ್ರ ತನಿಖೆ ನಡೆಸದಿದ್ದಲ್ಲಿ ಮುಂಬರುವ ವಿಧಾನಸಭೆಯ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುವುದಾಗಿ ಯತ್ನಾಳ ಹೇಳಿದರು. 

ಶಾಸಕ ಅನಿಲ ಬೆನಕೆ, ಬಿಜೆಪಿ ಮುಖಂಡ ಈರಣ್ಣ ಕಡಾಡಿ ಮೊದಲಾದವರಿದ್ದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button