ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಹುಬ್ಬಳ್ಳಿಗೆ ಆಗಮಿಸಲಿದ್ದು, ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹೆಲಿಕಾಪ್ಟರ್ ಮೂಲಕ ಬೆಳಗ್ಗೆ 9 ಗಂಟೆಗೆಬೆಂಗಳೂರಿನಿಂದ ಹೊರಟು 10.45ಕ್ಕೆ ಹುಬ್ಬಳ್ಳಿಗೆ ಆಗಮಿಸುವ ಅವರು 11 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸುವರು. ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ರಾಣೆಬೆನ್ನೂರು ತಾಲೂಕು ಹುಲಿಹಳ್ಳಿಗೆ ತೆರಳುವರು. ಹುಲಿಹಳ್ಳಿ ಹಾಗೂ ಜೋಯೀಸರ ಹಳ್ಳಿಗಳಲ್ಲಿ ಪ್ರಕೃತಿ ವಿಕೋಪ ಮತ್ತು ಬರಪರಿಹಾರ ಕಾಮಗಾರಿ ವೀಕ್ಷಿಸುವ ಅವರು ಸಂಜೆ ವಾಪಸ್ ಹುಬ್ಬಳ್ಳಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಶನಿವಾರ 10 ಗಂಟೆಗೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ರಾಯಚೂರು ಜಿಲ್ಲೆ ಸಿಂಧನೂರಿಗೆ ತೆರಳುವರು. ಅಲ್ಲಿ ಪಶುಮೇಳ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು.
ಮಧ್ಯಾಹ್ನ 3.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ