Latest

ಸಾಧನ ಮತ್ತು ಸಲಕರಣೆಗಳ ವಿತರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ದಿ ಅಸೋಸಿಯೇಷನ ಆಫ್ ಪೀಪಲ್ ವಿತ್ ಡಿಸೆಬಿಲಿಟಿ (ಎಪಿಡಿ) ಬೆಂಗಳೂರು ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ, ಬೆಳಗಾವಿ, ಅವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ ೨೩ ರಂದು ಸಂಜೆ ೪ ಗಂಟೆಗೆ ನಗರದ ಭಾರತ ಕಾಲನಿಯ ಮಹಿಳಾ ಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ೬ ವರ್ಷದೊಳಗಿನ ವಿಕಲಚೇತನ ಮಕ್ಕಳಿಗೆ ಅವಶ್ಯವಿರುವ ಸಾಧನ ಮತ್ತು ಸಲಕರಣೆಗಳ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಕಾರಂಜಿಮಠದ ಶ್ರೀ ಗುರುಸಿದ್ದ ಸ್ವಾಮಿಗಳು  ವಹಿಸುವರು. ಉದ್ಘಾಟಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜೇಂದ್ರ ಬೇಕಲ್ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕರಾದ ರಮೇಶ ಕೊಲಾರ, ಬೆಳಗಾವಿ ಜಿಲ್ಲಾ ಅಂಧರ ಸೇವಾ ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಬೆಂಬಳಗಿ, ಸರಳಾ ಹೇರೆಕರ, ಡಾ. ಮಹಾಂತೇಶ ರಾಮಣ್ಣವರ, ಆನಂದ ಎಸ್. ಗುಡಸ ಆಗಮಿಸುವರು ಎಂದು ಗೌರವ ಕಾರ್ಯದರ್ಶಿಗಳು ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button