Latest

ಸಿದ್ದಗಂಗಾ ಶ್ರೀ ಆರೋಗ್ಯ ಗಂಭೀರವಾಗಿದೆ, ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತೇವೋ ಗೊತ್ತಿಲ್ಲ -ವೈದ್ಯ

    ಪ್ರಗತಿವಾಹಿನಿ ಸುದ್ದಿ, ತುಮಕೂರು

ತುಮಕೂರಿನ ಸಿದ್ದಗಂಗಾ ಶ್ರೀಗಳ ಆರೋಗ್ಯ ನಿನ್ನೆ ರಾತ್ರಿಯಿಂದ ಗಂಭೀರವಾಗಿದೆ. ಅವರ ಶ್ವಾಸಕೋಶದಲ್ಲಿ ಏರುಪೇರಾಗಿದೆ. ಎಲ್ಲ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಯಶಸ್ಸಿನ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ಶ್ರೀಗಳನ್ನು ನೋಡಿಕೊಳ್ಳುತ್ತಿರುವ ವೈದ್ಯ ಡಾ.ಪರಮೇಶ್ವರ ತಿಳಿಸಿದ್ದಾರೆ. 

Home add -Advt

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು , ಶ್ರೀಗಳ ದೇಹದಲ್ಲಿ ಪ್ರೊಟೀನ್ ಬಹಳ ಕಡಿಮೆಯಾಗಿದೆ. ತೀರಾ ಕ್ರಿಟಿಕಲ್ ಆಗಿದೆ. ಇದರಿಂದ ಹೊರಬರಲು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಇನ್ನೊಂದೆರಡು ಗಂಟೆಯಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. 

Related Articles

Back to top button