ಪ್ರಗತಿವಾಹಿನಿ ಸುದ್ದಿ, ತುಮಕೂರು
ಈಚೆಗಷ್ಟೆ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದ ತುಮಕೂರಿನ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮಿಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅವರಿಗೆ ಕೃತಕ ಉಸಿರಾಟ ಅಳವಡಿಸಲಾಗಿದ್ದು, ತಜ್ಞ ವೈದ್ಯರು ವಿವಿಧ ತಪಾಸಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಆತಂಕ ಪಡುವಂತಹ ಸ್ಥಿತಿಯೇನೂ ಇಲ್ಲ. ಒಂದೆರಡು ದಿನದಲ್ಲಿ ಸ್ವಾಮಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರ ಅನುಯಾಯಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ