Kannada NewsLatest

ಸುರೇಶ ಅಂಗಡಿಗೆ ರೈಲ್ವೆ ರಾಜ್ಯ ಖಾತೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ:

ಬೆಳಗಾವಿ ಸಂಸದ ಸುರೇಶ ಅಂಗಡಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸ್ಥಾನ ನೀಡಲಾಗಿದೆ.

ಪ್ರಹ್ಲಾದ ಜೋಶಿಗೆ ಸಂಸದೀಯ ವ್ಯವಹಾರ, ಗಣಿ ಮತ್ತು ಭೂ ವಿಜ್ಞಾನ ಖಾತೆ, ಸದಾನಂದ ಗೌಡರಿಗೆ ರಸಗೊಬ್ಬರ ಇಲಾಖೆ ನೀಡಲಾಗಿದೆ. ನಿರ್ಮಲಾ ಸೀತಾರಾಮನ್ ಗೆ ಹಣಕಾಸು ಖಾತೆ ನೀಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೃಹ ಸಚಿವರಾಗಿದ್ದಾರೆ. ರಾಜನಾಥ ಸಿಂಗ್ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಲಿದ್ದಾರೆ.

Home add -Advt

ಇಂದು ಸಂಜೆ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.

ಹಲವರು ಯೋಜನೆಗಳ ನಿರೀಕ್ಷೆ: ಬೆಳಗಾವಿ ರೈಲ್ವೆ ಯೋಜನೆಗಳಲ್ಲಿ ತೀರಾ ಹಿಂದುಳಿದಿದೆ. ಧಾರವಾಡ -ಬೆಳಗಾವಿ ನೇರ ರೈಲ್ವೆ ಲೈನ್ ಸೇರಿದಂತೆ ಅನೇಕ ಸೌಲಭ್ಯಗಳು ಆಗಬೇಕಿದೆ. ಸುರೇಶ ಅಂಗಡಿ ಅವರ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button