ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರ :
ಕಳೆದ ಬಾರಿ ಕಿತ್ತೂರು ವಿಧಾನಸಭಾ ಚುನಾವಣೆಯಿಂದ ಕಿತ್ತೂರು ಮತಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ ಮಾಜಿ ಶಾಸಕ ಸುರೇಶ ಮಾರಿಹಾಳ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ.
ಬಲಿಷ್ಟ ದೇಶದ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೊತ್ತೊಮ್ಮೆ ಪ್ರಧಾನಿಯಾಗಬೇಕು. ಅದಕ್ಕೆ ಕ್ಷೇತ್ರದ ಮತದಾರರು ಕೆನರಾ ಲೋಕಸಭಾ ಮತಕ್ಷೆತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆಯವರಿಗೆ ಬೆಂಬಲಿಸಬೇಕೆಂದು ಹೇಳಿದರು.
ಮಾಜಿ ಶಾಸಕ ಸುರೇಶ ಮಾರಿಹಾಳ ಅವರು ಎರಡು ಬಾರಿ ಬಿಜೆಪಿ ಶಾಸಕರಾಗಿ ಕಿತ್ತೂರು ಕ್ಷೇತ್ರದಲ್ಲಿ ಕಿತ್ತೂರು ತಾಲೂಕು ಮಾಡುವಲ್ಲಿ ಹಾಗೂ ಎಂ.ಕೆ.ಹುಬ್ಬಳ್ಳಿ ಯ ಮಲಪ್ರಭಾ ನದಿಯಲ್ಲಿ ಗಂಗಾಬಿಕಾ ದೇವಸ್ಥಾನ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೆನೆ, ಮುಂದಿನ ದಿನಗಳಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಹೇಳಿದರು.
ಮಾಜಿ ಶಾಸಕ ಸುರೇಶ ಮಾರಿಹಾಳ ಅವರು ಬಿಜೆಪಿಗೆ ಬೆಂಬಲಿಸುವುದರಿಂದ ಈ ಭಾರಿ ಕ್ಷೇತ್ರದಲ್ಲಿ ಬಿಜೆಪಿಗೆ ಆನೆ ಬಲ ಬಂದಿದೆ ಎಂದು ಮಾರಿಹಾಳ ಬೆಂಬಲಿಗರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಇದರಿಂದ ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದಂತಾಗಿದೆ.
20 ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸುರೇಶ ಮಾರಿಹಾಳ ಬೆಂಬಲ ಸೂಚಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ