ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಹುಕ್ಕೇರಿ ಹಿರೇಮಠದ ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನಕ್ಕೆ ಶುಕ್ರವಾರ ಚಾಲನೆ ಸಿಗಲಿದೆ.
ಶುಕ್ರವಾರ ಬೆಳಿಗ್ಗೆ 8ಗಂಟೆಗೆ ಬಡಕುಂದ್ರಿಯ ಸುಕ್ಷೇತ್ರ ಹೊಳೆಮ್ಮಾದೇವಿ ದೇವಸ್ಥಾನದ ಹತ್ತಿರ ಹೀರಣ್ಯಕೇಶಿ ನದಿಯ ದಡದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪಂಚಾಯತಿ ಸಿಇಒ ರಾಮಚಂದ್ರನ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ನದಿ ದಡದಲ್ಲಿನ ಪ್ಲಾಸ್ಟಿಕ್ ಆಯುವ ಮೂಲಕ ಶ್ರೀಗಳೂ ಅಭಿಯಾನದಲ್ಲಿ ನೇರವಾಗಿ ಪಾಲ್ಗೊಳ್ಳಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ